alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಗಳೂರಿನಲ್ಲಿ ಸಾವಿಗೆ ಶರಣಾದ ಕೇರಳ ಮೂಲದ ಪ್ರೇಮಿಗಳು

hqdefault

ತಿಂಗಳ ಹಿಂದೆ ಮನೆ ಬಿಟ್ಟು ಬಂದಿದ್ದ ಕೇರಳ ಮೂಲದ ಪ್ರೇಮಿಗಳು ಮಂಗಳೂರಿನಲ್ಲಿ ತಾವು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೇರಳದ ವೈಕೋಂನ 36 ವರ್ಷದ ಮ್ಯಾಥ್ಯೂ ಹಾಗೂ ಎತುಮುನೂರಿನ 26 ವರ್ಷದ ಅಂಜು ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದ ಇವರುಗಳು ಮನೆಯವರ ವಿರೋಧದ ಕಾರಣಕ್ಕಾಗಿ ತಿಂಗಳ ಹಿಂದೆ ಮನೆ ಬಿಟ್ಟು ಬಂದು ಮಂಗಳೂರಿನ ಶಕ್ತಿ ನಗರದಲ್ಲಿ ನೆಲೆಸಿದ್ದರೆನ್ನಲಾಗಿದೆ.

ಅಂಜು ನಾಪತ್ತೆಯಾಗಿರುವ ಕುರಿತು ಎತುಮುನೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ನೆಲೆಸಿದ್ದ ವೇಳೆ ಅಂಜು ಆಸ್ಪತ್ರೆಯೊಂದರಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದಳೆನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಪೊಲೀಸರು ದೇಹಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...