alex Certify
ಕನ್ನಡ ದುನಿಯಾ       Mobile App
       

Kannada Duniya

ಆಗುಂಬೆಯಲ್ಲಿ ಕಿಮ್ಮನೆ ರತ್ನಾಕರ್ ಸತ್ಯಾಗ್ರಹ

kimmane_ra

ಶಿವಮೊಗ್ಗ: ರೈತರು, ಬಗರ್ ಹುಕುಂ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಾಜಿ ಸಚಿವ ಹಾಗೂ ಶಾಸಕ ಕಿಮ್ಮನೆ ರತ್ನಾಕರ್ ಹೋರಾಟ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಸಂಜೆ 7 ಗಂಟೆವರೆಗೆ ಹೋರಾಟ ನಡೆಸಲಿದ್ದಾರೆ. ಮೊದಲಿಗೆ ಕಿಮ್ಮನೆ ರತ್ನಾಕರ್ ಒಬ್ಬರೇ ಸತ್ಯಾಗ್ರಹ ಕುಳಿತಿದ್ದರು. ಬಳಿಕ ಅವರ ಬೆಂಬಲಿಗರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ರೈತರ ಬೆಳೆಗಳು ಹಾಳಾಗುತ್ತಿದ್ದು, ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರೂ, ಸ್ಪಂದಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ದೂರಿದ್ದಾರೆ.

ಸಾಗುವಳಿದಾರರು ಜಮೀನಿಗೆ ತೆರಳಲು ಕೂಡ ಅರಣ್ಯ ಇಲಾಖೆ ಸಿಬ್ಬಂದಿ ಅವಕಾಶ ನೀಡದೆ ಕಿರುಕುಳ ನೀಡುತ್ತಿದ್ದಾರೆ. ಕಾಡಾನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಕೂಡಲೇ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...