alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿಯಾಗಿ ಮೂವರು ದುರ್ಮರಣ

ಕೋಲಾರ: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಸಮೀಪದ ತಂಬಿಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಮುಳಬಾಗಿಲಿನಿಂದ ಕೋಲಾರಕ್ಕೆ ಮರಳು ತುಂಬಿದ್ದ ಟ್ರ್ಯಾಕ್ಟರ್ ತೆರಳುವಾಗ, ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಗುರುತು ಪತ್ತೆಯಾಗಿಲ್ಲ. ಕಾರು ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ನ ಟ್ರೇಲರ್ ಜಖಂಗೊಂಡಿದ್ದು, ಕಾರು ನಜ್ಜುಗುಜ್ಜಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...