alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಡಗು: ಪ್ರವಾಸಿಗರ ಮೇಲಿನ ನಿಷೇಧ ವಿಸ್ತರಣೆ

ಮಡಿಕೇರಿ: ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಸಂಪೂರ್ಣವಾಗಿ ತತ್ತರಿಸಿ ಹೋಗಿರುವ ದಕ್ಷಿಣದ ಕಾಶ್ಮೀರ ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಮೇಲಿನ ನಿಷೇಧವನ್ನು ಸೆ.9ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಶ್ರೀವಿದ್ಯಾ ಅಧಿಕೃತ ಆದೇಶ ಹೊರಡಿಸಿದ್ದು, ಈ ಹಿಂದೆ ಆ.31 ರವರೆಗೆ ಹೇರಿದ್ದ ನಿಷೇಧವನ್ನು ಈಗ ಸೆ.9 ರವರೆಗೆ ವಿಸ್ತರಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಇನ್ನೂ ದುರಸ್ತಿಕಾರ್ಯ ಮುಗಿದಿಲ್ಲ. ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಹೋಟೆಲ್, ಹೋಂ ಸ್ಟೇ, ರೆಸಾರ್ಟ್ ಗಳು ಇನ್ನೂ ಸಂಕಷ್ಟದಲ್ಲಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಹಾಗೂ ಮುಂಜಾಗೃತಾ ಕ್ರಮವಾಗಿ ಇನ್ನೂ 9 ದಿನಗಳವರೆಗೆ ನಿಷೇಧ ಹೇರಲಾಗಿದೆ.

ಅಲ್ಲದೇ ದುರಂತಕ್ಕೀಡಾಗಿರುವ ಜಿಲ್ಲೆಯ ವಿವಿಧ ಸ್ಥಳಗಳಿಗೆ ಪ್ರವಾಸಿಗರು ಭೇಟಿ ನೀಡಿ, ತೊಂದರೆಯುಂಟಾಗುತ್ತಿರುವ ಹಿನ್ನಲೆಯಲ್ಲಿ ಕೆಲದಿನಗಳ ವರೆಗೆ ಪ್ರವಾಸಿಗರಿಗೆ ನಿಷೇಧ ಹೇರುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...