alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಪ್ಪು ಜಯಂತಿ ವಿರೋಧಿಸಿ ನಿರ್ಣಯ

ಮಡಿಕೇರಿ: ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬಾರದು ಎಂದು ಒತ್ತಾಯಿಸಿ, ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಬಿ.ಜೆ.ಪಿ. ಅಧಿಕಾರದಲ್ಲಿದ್ದು, ನವೆಂಬರ್ 10 ರಂದು ನಡೆಯಬೇಕಿರುವ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸದಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ನಿರ್ಣಯವನ್ನು ಸರ್ಕಾರಕ್ಕೆ ಕಳುಹಿಸಲಾಗುವುದು.

ಕಳೆದ 2 ವರ್ಷಗಳಿಂದಲೂ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತವಾಗಿದೆ. ಮೊದಲ ವರ್ಷ ಇಬ್ಬರು ಬಲಿಯಾಗಿದ್ದು, ಹಠಮಾರಿ ಧೋರಣೆಯಿಂದ ಜಯಂತಿ ಆಚರಿಸಿದರೆ, ಸೌಹಾರ್ದತೆಗೆ ಧಕ್ಕೆಯಾಗಲಿದೆ. ಬಿಗಿ ಬಂದೋಬಸ್ತ್ ನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಜನಜೀವನ ಅಸ್ತವ್ಯಸ್ತಗೊಳಿಸಿ ಟಿಪ್ಪು ಜಯಂತಿ ಆಚರಿಸಬಾರದು ಎಂದು ಬಿ.ಜೆ.ಪಿ. ಸದಸ್ಯರು ಒತ್ತಾಯಿಸಿದ್ದಾರೆ.

ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆಯ ಬಳಿಕ, ಅಂತಿಮವಾಗಿ ಟಿಪ್ಪು ಜಯಂತಿ ಆಚರಿಸಬಾರದು ಎಂದು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...