alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಮಕ್ಕಳ ಮೇಲೆ ಹರಿದ ಕಾರು, ಸ್ಥಳದಲ್ಲೇ ವಿದ್ಯಾರ್ಥಿ ಸಾವು

ಕೋಲಾರ: ಕೋಲಾರ ತಾಲ್ಲೂಕಿನ ವಡಗೂರು ಗೇಟ್ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಮಕ್ಕಳ ಮೇಲೆ ಕಾರು ಹರಿದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

8 ನೇ ತರಗತಿ ವಿದ್ಯಾರ್ಥಿ ಸುದರ್ಶನ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವೇಗವಾಗಿದ್ದ ಕಾರು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳ ಮೇಲೆ ಚಲಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಮನವಿ ಮಾಡಿದ್ದರೂ, ಸಂಬಂಧಿಸಿದವರು ಸ್ಪಂದಿಸಿಲ್ಲ ಎಂದು ದೂರಿದ್ದಾರೆ. ಸ್ಥಳೀಯರ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...