alex Certify
ಕನ್ನಡ ದುನಿಯಾ       Mobile App
       

Kannada Duniya

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ

ನವಜಾತ ಹೆಣ್ಣು ಶಿಶುವನ್ನು ಕಳ್ಳತನ ಮಾಡಿರುವ ಘಟನೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೇಣುಕುಮಾರಿ ಹಾಗೂ ನಾರಾಯಣಸ್ವಾಮಿ ದಂಪತಿ ಮಗು ಕಳೆದುಕೊಂಡವರು.

ಮುಳಬಾಗಿಲು ತಾಲೂಕಿನ ಪದ್ಮಸಂದ್ರ ಗ್ರಾಮದ ದಂಪತಿ ತಮ್ಮ ಮಗು ಕಳ್ಳತನವಾದ ಪ್ರಕರಣದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಮಗು ಕಾಣೆಯಾಗಿರುವುದು ತಿಳಿದ ತಕ್ಷಣ ನಾರಾಯಣಸ್ವಾಮಿ ಹಾಗೂ ಅವರ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದ ಕಾರಣ ಈಗ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...