alex Certify
ಕನ್ನಡ ದುನಿಯಾ       Mobile App
       

Kannada Duniya

ವಿಡಿಯೋ ತೋರಿಸಿ ಯುವತಿಗೆ ಲೈಂಗಿಕ ಕಿರುಕುಳ

ಕೋಲಾರ: ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು, ಆ ದೃಶ್ಯಗಳನ್ನು ಸೆರೆ ಹಿಡಿದು ನಿರಂತರವಾಗಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವರ್ಷದ ಹಿಂದೆ ತಂಪು ಪಾನೀಯದಲ್ಲಿ ಮತ್ತು ಬರುವ ಪದಾರ್ಥ ಹಾಕಿ ಇಬ್ಬರು ಕಾಮುಕರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ತಮ್ಮ ಕೃತ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.

ನಂತರದಲ್ಲಿ ಯುವತಿಯನ್ನು ಬೆದರಿಸಿ ನಿರಂತರವಾಗಿ ಕಿರುಕುಳ ನೀಡಿದ್ದು, ಈ ವಿಚಾರ ಹಿರಿಯರಿಗೆ ಗೊತ್ತಾಗಿ ಪಂಚಾಯಿತಿ ನಡೆಸಿ ಯುವತಿಯನ್ನು ಹೈದರಾಬಾದ್ ಮೂಲದ ಯುವಕನಿಗೆ ಕೊಟ್ಟು ಮದುವೆ ಮಾಡಲಾಗಿದೆ.

ಆದರೂ ಸುಮ್ಮನಾಗದ ಕಾಮುಕರು ಯುವತಿಗೆ ಬೆದರಿಸಿದ್ದಾರೆ. ಆಕೆಯ ಪತಿಗೆ ವಿಡಿಯೋ ಕಳಿಸಿದ್ದು, ಇದನ್ನು ನೋಡಿದ ಪತಿ ಡೈವೋರ್ಸ್ ಕೊಟ್ಟಿದ್ದಾನೆ.

ತವರು ಮನೆ ಸೇರಿಕೊಂಡ ಯುವತಿಗೆ ಕಾಮುಕರು ಮತ್ತೆ ಬೆದರಿಸಿದ್ದಾರೆ. ಅತ್ಯಾಚಾರದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.

ಇದರಿಂದ ಕಂಗಾಲಾದ ಯುವತಿ, ಪೋಷಕರ ನೆರವಿನಿಂದ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...