alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ಯಾಂಕರ್–ಟ್ರ್ಯಾಕ್ಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಕೊಪ್ಪಳ: ಡೀಸೆಲ್ ಟ್ಯಾಂಕರ್–ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು ಕಂಡ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಥಳಕಲ್–ಬನ್ನಿಕೋಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿಯಾಗಿವೆ. ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...