alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಅಧಿಕಾರಿಗಳಿಬ್ಬರಿಗೆ ಗಂಭೀರ ಗಾಯ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಕಳಮಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಅಧಿಕಾರಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಗಾವತಿ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಉದಯರವಿ, ಮೈಸೂರು ಕೆ.ಎಸ್.ಆರ್.ಟಿ.ಸಿ. ಡಿಪೋ ಅಧಿಕಾರಿ ಷಡಕ್ಷರಯ್ಯ ಗಾಯಗೊಂಡವರು.

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇವರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ತಾವರಗೇರಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...