alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲಿದ್ದಾಗಲೇ ನಡೀತು ದುರಾದೃಷ್ಟಕರ ಘಟನೆ

ಕೊಪ್ಪಳ: ಮನೆಯಲ್ಲಿ ಮಲಗಿದ್ದ ತಂದೆ, ಮಗಳ ಮೇಲೆ ಕರಡಿ ದಾಳಿ ನಡೆಸಿದ ಘಟನೆ, ಕೊಪ್ಪಳ ತಾಲ್ಲೂಕಿನ ಆಚಾರಿ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ(45) ಮೃತಪಟ್ಟವರು. ಅವರ ಪುತ್ರಿ ವಿಶಾಲಾಕ್ಷಿ(13) ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ಹೊರ ವಲಯದ ಜಮೀನಿನಲ್ಲಿರುವ ಮನೆಯಲ್ಲಿ ಇವರಿಬ್ಬರು ಮಲಗಿದ್ದ ಸಂದರ್ಭದಲ್ಲಿ ಕರಡಿ ದಾಳಿ ಮಾಡಿದೆ.

ಸ್ಥಳದಲ್ಲೇ ಹನುಮಂತಪ್ಪ ಸಾವನ್ನಪ್ಪಿದ್ದಾರೆ. ವಿಶಾಲಾಕ್ಷಿ ತಲೆ, ಮುಖಕ್ಕೆ ಆಳವಾದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...