alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಕೊಪ್ಪಳ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಗುನ್ನಾಳ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಸಿಬ್ಬಂದಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಿನ ಜಾವ ಬಸ್ ನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಮಲಗಿದ್ದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ 32 ಪ್ರಯಾಣಿಕರು ಮತ್ತು ಲಗೇಜ್ ಗಳನ್ನು ಬಸ್ ಸಿಬ್ಬಂದಿ ಕೆಳಗೆ ಇಳಿಸಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬೇವೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...