alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಮೆಂಟ್ ಕಾರ್ಖಾನೆಗೆ ಬೆಂಕಿ ತಗುಲಿ ಭಾರೀ ನಷ್ಟ

fire-ciment

ಕೊಪ್ಪಳ: ಕೊಪ್ಪಳ ಜಿಲ್ಲೆ ಗಿಣಿಗೇರಾ ಗ್ರಾಮದ ಸಮೀಪದಲ್ಲಿರುವ ಸಿಮೆಂಟ್ ಕಾರ್ಖಾನೆಗೆ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿದೆ.

ರಾತ್ರಿ ಪ್ಯಾಕಿಂಗ್ ವಿಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಆವರಿಸಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

ಕೊಪ್ಪಳ ಹಾಗೂ ವಿವಿಧ ಕಡೆಗಳಿಂದ ಆಗಮಿಸಿದ 10 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಕೊಪ್ಪಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...