alex Certify
ಕನ್ನಡ ದುನಿಯಾ       Mobile App
       

Kannada Duniya

ಆಘಾತಕಾರಿ ಕೃತ್ಯವೆಸಗಿದ ಮಹಿಳೆ, ಮಕ್ಕಳು

ಕೊಪ್ಪಳ: ಶೀಲ ಶಂಕಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ಯಲಬುರ್ಗಾ ತಾಲ್ಲೂಕಿನ ಹರಿಶಂಕರಬಂಡಿ ಗ್ರಾಮದಲ್ಲಿ ನಡೆದಿದೆ.

ಪ್ರಭಯ್ಯ ಎಂಬುವವರು ಸುಟ್ಟಗಾಯಗಳಿಂದ ಗಂಭೀರ ಸ್ಥೀತಿಯಲ್ಲಿದ್ದು, ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸೇರಿಸಲಾಗಿದೆ.

ಗದಗ ಜಿಲ್ಲೆ ರೋಣ ತಾಲ್ಲೂಕು ನರೇಗಲ್ ನಿವಾಸಿಯಾಗಿರುವ ಪ್ರಭಯ್ಯ, 5 ವರ್ಷಗಳಿಂದ ಹರಿಶಂಕರಬಂಡಿ ಗ್ರಾಮದಲ್ಲಿದ್ದಾರೆ. ಪತ್ನಿಯ ಶೀಲ ಶಂಕಿಸಿ ಅವರು ಜಗಳವಾಡುತ್ತಿದ್ದು, ನಿನ್ನೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಆಕ್ರೋಶಗೊಂಡ ಪತ್ನಿ ಮತ್ತು ಮಕ್ಕಳು ಪ್ರಭಯ್ಯರಿಗೆ ಬೆಂಕಿ ಹಚ್ಚಿದ್ದಾರೆ.

ಕುಕನೂರು ಠಾಣೆ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...