alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಟ್ಟಿಂಗ್ ವಿಷಯಕ್ಕೆ ಗುಂಪು ಘರ್ಷಣೆ

kopla-beting

ಕೊಪ್ಪಳ: ಐ.ಪಿ.ಎಲ್. ಕ್ರಿಕೆಟ್ ಬೆಟ್ಟಿಂಗ್ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ 2 ಗ್ರಾಮಗಳ ಯುವಕರ ಗುಂಪಿನ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನಲ್ಲಿ ನಡೆದಿದೆ.

ಮೈಲಾಪುರ ಹಾಗೂ ಬೇವಿನಾಳ ಗ್ರಾಮದ ಯುವಕರಿಬ್ಬರ ನಡುವೆ ಬೆಟ್ಟಿಂಗ್ ವಿಚಾರಕ್ಕೆ ಜಗಳವಾಗಿದೆ. ಇದು ವಿಕೋಪಕ್ಕೆ ತಿರುಗಿ ಎರಡೂ ಗ್ರಾಮಗಳ ಸುಮಾರು 200 ಕ್ಕೂ ಅಧಿಕ ಮಂದಿ ಹೊಡೆದಾಡಿಕೊಂಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದು, ಬೆಟ್ಟಿಂಗ್ ಜಗಳಕ್ಕೆ ಕಾರಣರಾದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ

20 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗ್ರಾಮದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...