alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ಹತ್ತುವಾಗಲೇ ನಡೀತು ದುರ್ಘಟನೆ

mahile-rail-kopl

ಕೊಪ್ಪಳ: ಚಲಿಸುತ್ತಿದ್ದ ರೈಲು ಹತ್ತುವ ಸಂದರ್ಭದಲ್ಲಿ ಕೆಳಬಿದ್ದ ಮಹಿಳೆಯೊಬ್ಬರು 2 ಕಾಲು ಕಳೆದುಕೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯ ಭಾನಾಪುರ ರೈಲು ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸೋಂಪುರದ ಮಲ್ಲಮ್ಮ ಕಾಲು ಕಳೆದುಕೊಂಡವರು.

ಬೆಂಗಳೂರಿಗೆ ಹೊರಟಿದ್ದ ಹಂಪಿ ಎಕ್ಸ್ ಪ್ರೆಸ್ ರೈಲನ್ನು ಹತ್ತುವ ಧಾವಂತದಲ್ಲಿ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಅವರ ಕಾಲಿನ ಮೇಲೆ ರೈಲು ಹರಿದು, ಕಾಲುಗಳು ತುಂಡಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಮಲ್ಲಮ್ಮರನ್ನು ಕೊಪ್ಪಳ ಆಸ್ಪತ್ರೆಗೆ ಸೇರಿಸಲಾಗಿದೆ.

ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಹೊರಟಿದ್ದ ಮಲ್ಲಮ್ಮ ಅವಸರದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿದ್ದರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...