alex Certify
ಕನ್ನಡ ದುನಿಯಾ       Mobile App
       

Kannada Duniya

ಏಕಾಏಕಿ ನಡೆದ ಘಟನೆಯಿಂದ ಬೆಚ್ಚಿ ಬಿದ್ದ ಜನ

kopala-wall

ಕೊಪ್ಪಳ: ಕೊಪ್ಪಳ ಸಮೀಪದ ಹೊಸಹಳ್ಳಿಯ ಜನ ಏಕಾಏಕಿ ನಡೆದ ಘಟನೆಯಿಂದ ಭಯಭೀತರಾಗಿದ್ದಾರೆ. ಅಷ್ಟಕ್ಕೂ ಏನಿದು ಘಟನೆ ಎಂಬುದನ್ನು ತಿಳಿಯಲು ಮುಂದೆ ಓದಿ.

ಹೊಸಹಳ್ಳಿಯ ಶ್ರೀಪಾದ ಭಟ್ ಎಂಬುವವರ ಮನೆಯಲ್ಲಿ ಭಾರಿ ಕಂಪನದೊಂದಿಗೆ ಮನೆಯ ಛಾವಣಿ, ಗೋಡೆ ಕುಸಿದಿದ್ದು, ಕಿಟಕಿ ಗಾಜುಗಳು ಪುಡಿಯಾಗಿವೆ. ಮನೆಯೊಳಗಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಮನೆಯಲ್ಲಿದ್ದ ಸಿಲಿಂಡರ್ ಸ್ಪೋಟವಾಗಿಲ್ಲ. ತಮಗೆ ಭೂಕಂಪವಾದ ಅನುಭವವಾಗಿದೆ ಎಂದು ಶ್ರೀಪಾದ ಭಟ್ ಹೇಳಿದ್ದಾರೆ.

ಗ್ರಾಮಸ್ಥರು ಏಕಾಏಕಿ ನಡೆದ ಘಟನೆಯಿಂದ ಭಯಭೀತರಾಗಿದ್ದಾರೆ. ಚಿತ್ರದುರ್ಗ, ತುಮಕೂರು ದಾವಣಗೆರೆ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾದ ಬಳಿಕ, ಕೊಪ್ಪಳದಲ್ಲಿ ಮನೆ ಬಿರುಕು ಬಿಟ್ಟಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...