alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಬ್ಯಾನರ್ ಹರಿದವನಿಗೆ ಚಪ್ಪಲಿ ಏಟು

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣದಲ್ಲಿ ಬಿ.ಜೆ.ಪಿ. ಬ್ಯಾನರ್ ಹರಿದ ವ್ಯಕ್ತಿಗೆ ಕಾರ್ಯಕರ್ತರು ಚಪ್ಪಲಿಯಿಂದ ಬಾರಿಸಲಾಗಿದೆ.

ವಿವಿಧ ಪಕ್ಷಗಳ ಮುಖಂಡರು ಮಂಗಳವಾರ ಪಕ್ಷ ಸೇರ್ಪಡೆಯಾಗಲಿರುವ ಹಿನ್ನಲೆಯಲ್ಲಿ ಪಕ್ಷದ ನಾಯಕರು ಆಗಮಿಸಲಿದ್ದಾರೆ. ನಾಯಕರಿಗೆ ಸ್ವಾಗತ ಕೋರಿ ಪಟ್ಟಣದಲ್ಲಿ ಬಿ.ಜೆ.ಪಿ. ವತಿಯಿಂದ ಫ್ಲೆಕ್ಸ್, ಬ್ಯಾನರ್ ಹಾಕಲಾಗಿದೆ.

ಆದರೆ, ಯಲಬುರ್ಗಾ ತಾಲ್ಲೂಕಿನ ತಲಗೇರಾದ ವ್ಯಕ್ತಿಯೊಬ್ಬ ಬ್ಯಾನರ್ ಹರಿದಿದ್ದಾನೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು, ನಡುರಸ್ತೆಯಲ್ಲೇ ಬ್ಯಾನರ್ ಹರಿದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಪ್ಪಲಿಯಿಂದ ಬಾರಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...