alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲಿ ಆಟವಾಡುವಾಗಲೇ ಕಾದಿತ್ತು ದುರ್ವಿಧಿ

kopal-bket-hand

ಕೊಪ್ಪಳ: ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶರಣಬಸವೇಶ್ವರ ಕ್ಯಾಂಪ್ ನಿವಾಸಿ ಮೌಲಾ ಹುಸೇನ್ ಅವರ 1 ವರ್ಷದ ಗಂಡು ಮಗು ರಿಹಾನ್ ಮೃತಪಟ್ಟವ. ಮನೆಯವರೆಲ್ಲಾ ಹೊರಗೆ ಕುಳಿತಿದ್ದ ಸಂದರ್ಭದಲ್ಲಿ ಆಟವಾಡುತ್ತಿದ್ದ ಮಗು ಒಳಗೆ ಹೋಗಿದೆ.

ಆಟವಾಡುತ್ತಿರಬಹುದೆಂದು ಮನೆಯವರೂ ಕೂಡ ಗಮನಿಸಿಲ್ಲ. ಬಹು ಹೊತ್ತಿನವರೆಗೂ ಮಗುವಿನ ಶಬ್ಧ ಕೇಳದ ಕಾರಣ, ತಾಯಿ ಮನೆಯೊಳಗೆ ಹೋಗಿ ನೋಡಿದ್ದಾರೆ.

ನೀರು ತುಂಬಿದ ಬಕೆಟ್ ನಲ್ಲಿ ತಲೆಕೆಳಗಾಗಿ ಬಿದ್ದಿದ್ದ ಕಂದಮ್ಮ ಅಸ್ವಸ್ಥಗೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಈ ವೇಳೆಗೆ ಮಗು ಮೃತಪಟ್ಟಿತ್ತೆನ್ನಲಾಗಿದೆ.

ಮಗುವನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...