alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯ ಕಿಡ್ನಾಪ್, ವಿಷ ಸೇವಿಸಿದ ಪತಿ

kopla-a-lo

ಕೊಪ್ಪಳ: ಪ್ರೀತಿಸಿ ಮದುವೆಯಾದ ಯುವ ಜೋಡಿಯನ್ನು ಬೇರ್ಪಡಿಸಿದ ಘಟನೆ ಬೆಳಕಿಗೆ ಬಂದಿದ್ದು, ಮನನೊಂದ ಯುವಕ ವಿಷ ಸೇವಿಸಿದ್ದಾನೆ.

ಕೊಪ್ಪಳ ಜಿಲ್ಲೆ ಸಿಂಧೋಗಿ ಗ್ರಾಮದ ಯುವಕ ಮೊಬೈಲ್ ಅಂಗಡಿ ಹೊಂದಿದ್ದು, 3 ವರ್ಷಗಳಿಂದ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರ ಆಪ್ತರ ಮಗಳನ್ನು ಪ್ರೀತಿಸಿದ್ದ.

2016 ರ ಸೆಪ್ಟಂಬರ್ 26 ರಂದು ಇಬ್ಬರೂ ಕಾನೂನುಬದ್ಧವಾಗಿ ಮದುವೆಯಾಗಿ ಒಟ್ಟಿಗೆ ವಾಸಿಸುತ್ತಿದ್ದರು. ಯುವತಿಯ ತಂದೆ ಮನೆಗೆ ಬಂದು ಯುವಕ ಮತ್ತು ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾನೆ.

ತನ್ನ ಪ್ರಭಾವ ಬಳಸಿ ಯುವಕ ನೀಡಿದ್ದ ದೂರು ದಾಖಲಾಗದಂತೆ ನೋಡಿಕೊಂಡಿದ್ದಾನೆ. ಇತ್ತೀಚೆಗೆ ಮತ್ತೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಯುವತಿಯ ಅಪ್ಪ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾನೆ.

ಇದರಿಂದ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೊಪ್ಪಳ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...