alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಗೂ ಮುನ್ನವೇ ‘ಕೈ’ ತಪ್ಪಲಿದೆಯಾ ಈ ಕ್ಷೇತ್ರ?

ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತನೂರು ಮಂಜುನಾಥ್ ಅವರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪು ಕಾಂಗ್ರೆಸ್ ಪಕ್ಷಕ್ಕೂ ಶಾಕ್ ನೀಡಿದೆ.

ಕೊತ್ತನೂರು ಮಂಜುನಾಥ್ ಈ ಬಾರಿಯೂ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಈ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕಾರಣ ಹೈಕೋರ್ಟ್ ಕೊತ್ತನೂರು ಮಂಜುನಾಥ್ ರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿರುವ ಹಿನ್ನಲೆಯಲ್ಲಿ ಅವರ ನಾಮಪತ್ರ ತಿರಸ್ಕೃತಗೊಳ್ಳಲಿದೆ ಎನ್ನಲಾಗಿದೆ.

ಈ ಕಾರಣಕ್ಕಾಗಿಯೇ ಕೊತ್ತನೂರು ಮಂಜುನಾಥ್ ಕೋಲಾರ ಕ್ಷೇತ್ರದಿಂದಲೂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆಂದು ಹೇಳಲಾಗಿದ್ದು, ಮುಳಬಾಗಿಲು ಕ್ಷೇತ್ರದಲ್ಲಿ ಮಂಜುನಾಥ್ ರ ನಾಮಪತ್ರ ತಿರಸ್ಕೃತಗೊಂಡರೆ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಲ್ಲದಂತಾಗುತ್ತಾರೆ. ಅಲ್ಲದೇ ನಾಮಪತ್ರ ಸಲ್ಲಿಕೆ ದಿನಾಂಕವೂ ಮುಗಿದಿರುವ ಕಾರಣ ಕಾಂಗ್ರೆಸ್ ಈಗ ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಅವಕಾಶವೂ ಇಲ್ಲದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...