alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕರ ವಿರೋಧದ ನಡುವೆಯೂ ಕಾಂಗ್ರೆಸ್ ಸೇರ್ಪಡೆಗೊಂಡ ಖೇಣಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದೆ. ಈಗಾಗಲೇ ಕೆಲ ಶಾಸಕರು ತಾವಿರುವ ಪಕ್ಷವನ್ನು ತೊರೆದು ಮತ್ತೊಂದು ಪಕ್ಷವನ್ನು ಸೇರ್ಪಡೆಗೊಂಡಿರುವ ಮಧ್ಯೆ ಇಂದು ಮತ್ತೊಬ್ಬ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ, ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿ. ಪರಮೇಶ್ವರ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಕಾಂಗ್ರೆಸ್ ನ ಕೆಲ ಪ್ರಭಾವಿ ಶಾಸಕರು ಅಶೋಕ್ ಖೇಣಿ ಅವರ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸಿದ್ದರೂ ಇದಕ್ಕೆ ಮಣಿಯದ ಕಾಂಗ್ರೆಸ್ ನಾಯಕರು ಖೇಣಿಯವರನ್ನು ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮುನ್ನ ಅಶೋಕ್ ಖೇಣಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಬಳಿಕ ಕೆಪಿಸಿಸಿ ಕಛೇರಿಗೆ ಆಗಮಿಸಿ ಕಾಂಗ್ರೆಸ್ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಂದ ಬಾವುಟ ಪಡೆಯುವ ಮೂಲಕ ಪಕ್ಷ ಸೇರ್ಪಡೆಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...