alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ನಡುವೆ ಅಸಮಾಧಾನ ಉಂಟಾಗಿದೆ.

ಪರಮೇಶ್ವರ್ ಸೂಚಿಸಿದವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲಿಲ್ಲ. ಅಲ್ಲದೇ ಅವರು ಸೂಚಿಸಿದವರಿಗೆ ಸಚಿವ ಸ್ಥಾನವನ್ನು ನೀಡದ ಕಾರಣ, ಪರಮೇಶ್ವರ್ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿದಿದ್ದರು. ಈ ಮೂಲಕ ಅಸಮಾಧಾನವನ್ನು ಹೊರ ಹಾಕಿದ್ದರು.

ಇದು ಸಿ.ಎಂ ಮತ್ತು ಪರಂ ನಡುವೆ ಸರಿ ಇಲ್ಲ ಎಂಬದನ್ನು ಬಿಂಬಿಸುವಂತಿತ್ತು. 2 ದಿನಗಳಾದರೂ ಪರಮೇಶ್ವರ್ ಹೊರಗೆ ಕಾಣಿಸಿಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನಲ್ಲೇ ಇದ್ದರೂ, ಪರಮೇಶ್ವರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದು, ಪಕ್ಷದಲ್ಲಿ ಭಿನ್ನಮತವಿದೆ ಎಂದೆಲ್ಲಾ ಹೇಳಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ದೂರಿದ್ದು, ವೇಣುಗೋಪಾಲ್, ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಇಂತಹ ಸಂದರ್ಭದಲ್ಲಿ ಮುನಿಸು ಸರಿಯಲ್ಲವೆಂದು ಪರಮೇಶ್ವರ್ ಅವರಿಗೆ ತಿಳಿಸಿದ್ದಾರೆ.

ವೇಣುಗೋಪಾಲ್ ಹೀಗೆ ಹೇಳಿದ ಬಳಿಕ, ಪರಮೇಶ್ವರ್ ದಿಢೀರ್ ಪತ್ರಿಕಾಗೋಷ್ಠಿ ನಡೆಸಿ, ಸಿ.ಎಂ. ಮತ್ತು ನನ್ನ ನಡುವೆ ಕೋಲ್ಡ್ ವಾರ್ ಇಲ್ಲ, ಹಾಟ್ ವಾರೂ ಇಲ್ಲ ಎಂದು ಹೇಳಿದ್ದಾರೆ.

ಸಚಿವರ ಆಯ್ಕೆಯ ವಿಚಾರದಲ್ಲಿ ನಾನು, ಸಿ.ಎಂ. ಬೇರೆ ಹೆಸರು ಸೂಚಿಸಿದ್ದರೂ, ಬಳಿಕ ಒಟ್ಟಿಗೆ ತೀರ್ಮಾನ ಕೈಗೊಂಡಿದ್ದೇವೆ. ನನಗೆ ಜ್ವರವಿದ್ದ ಕಾರಣ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಾಗಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ, ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದಾಕ್ಷಣ ಎಲ್ಲವೂ ಮುಗಿದಂತಾಗಿಲ್ಲ. ಅಸಮಾಧಾನ ಹಾಗೆಯೇ ಮುಂದುವರೆದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...