alex Certify
ಕನ್ನಡ ದುನಿಯಾ       Mobile App
       

Kannada Duniya

ಭಿನ್ನಮತ ಶಮನಕ್ಕೆ ಮುಂದಾದ ಕಾಂಗ್ರೆಸ್ ನಾಯಕರು

cong-venu

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇಂದು ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಇಂದಿನಿಂದ 5 ದಿನಗಳ ಕಾಲ ಸಭೆ ನಡೆಯಲಿದ್ದು, ಪ್ರತಿ ದಿನ 5 -6 ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತದೆ.

ವೇಣುಗೋಪಾಲ್ ಉಸ್ತುವಾರಿಯಾಗಿ ನೇಮಕವಾಗುತ್ತಲೇ ಕಾಂಗ್ರೆಸ್ ನಲ್ಲಿ ಚಟುವಟಿಕೆ ಬಿರುಸುಗೊಂಡಿವೆ. ಇತ್ತೀಚೆಗಷ್ಟೇ ಅವರು ಪಕ್ಷದ ನಾಯಕರೊಂದಿಗೆ, ಸಂಘಟನೆ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷರ ಆಯ್ಕೆ ವಿಚಾರವಾಗಿ ಚರ್ಚಿಸಿದ್ದರು.

ಇಂದಿನಿಂದ ಜಿಲ್ಲಾ ನಾಯಕರ ಸಭೆಗಳು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮೊದಲಾದವರು ಭಾಗವಹಿಸಲಿದ್ದಾರೆ.

2018 ರ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚಿಸಲಾಗುವುದು. ಇದರೊಂದಿಗೆ ವಿವಿಧ ಜಿಲ್ಲಾ ಸಮಿತಿಗಳಲ್ಲಿನ ಭಿನ್ನಮತವನ್ನು ಶಮನಗೊಳಿಸಲಾಗುವುದು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...