alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ..?

kharge-d

ನವದೆಹಲಿ: ಕಾಂಗ್ರೆಸ್ ಪಕ್ಷದ ಸಾರಥ್ಯವನ್ನು ಯಾರಿಗೆ ವಹಿಸಲಾಗುತ್ತದೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಇದುವರೆಗೂ ಕೇಳಿ ಬರದಿದ್ದ ಹೆಸರೊಂದು ಮುನ್ನೆಲೆಗೆ ಬಂದಿದೆ.

ಡಿ.ಕೆ.ಶಿವಕುಮಾರ್, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, ಮುನಿಯಪ್ಪ ಅವರ ಹೆಸರುಗಳು ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದವು. ಅಲ್ಲದೇ ಡಾ. ಜಿ. ಪರಮೇಶ್ವರ್ ತಾವೇ ಅಧ್ಯಕ್ಷರಾಗಿ ಮುಂದುವರೆಯಲು ಆಸಕ್ತಿ ತೋರಿದ್ದರು.

ಇದೆಲ್ಲಾ ಬೆಳವಣಿಗೆಗಳ ನಡುವೆಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು 3 ದಿನಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಹಿರಿಯ, ಕಿರಿಯ ನಾಯಕರು, ಮುಖಂಡರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನದ ಕುರಿತಾಗಿಯೂ ಚರ್ಚೆ ನಡೆದಿದೆ.

ಕಾಂಗ್ರೆಸ್ ಹೈಕಮಾಂಡ್, ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಿಸಲು ಮುಂದಾಗಿದೆ. ಖರ್ಗೆಯವರು ನಿನ್ನೆಯಷ್ಟೇ ತಮಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯಾರೂ ತಮ್ಮೊಂದಿಗೆ ಚರ್ಚಿಸಿಲ್ಲ. ಹಾಗಾಗಿ ಈ ವಿಷಯದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದರು.

ಲೋಕಸಭೆಯ ಕಾಂಗ್ರೆಸ್ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನ ನೀಡಿದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ ಎಂಬ ಕಾರಣವಿದೆ.

ಖರ್ಗೆಯವರನ್ನು ನೇಮಕ ಮಾಡಲು ಕಾಂಗ್ರೆಸ್ ಆಸಕ್ತಿ ಹೊಂದಿದ್ದು, ಇದೇ ಕಾರಣಕ್ಕೆ ಪರಮೇಶ್ವರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ಸಾಧಕ ಬಾಧಕಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. ಆ ನಂತರದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...