alex Certify
ಕನ್ನಡ ದುನಿಯಾ       Mobile App
       

Kannada Duniya

ಫೆ.26 ಕ್ಕೆ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

kpcc-officeವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಪ್ರಮುಖ ನಾಯಕರು ಪಕ್ಷ ತೊರೆಯಲು ಮುಂದಾಗಿರುವ ಕಾರಣ ಫೆಬ್ರವರಿ 26 ರಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ಸಿಗ ಎಸ್.ಎಂ. ಕೃಷ್ಣಾ ಪಕ್ಷ ತೊರೆಯುವ ಮಾತುಗಳನ್ನಾಡಿದ್ದು, ಇನ್ನೂ ಹಲವು ನಾಯಕರು ಅವರ ದಾರಿ ಅನುಸರಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ ಪಕ್ಷದ ಕೆಲ ನಾಯಕರು ಸರ್ಕಾರದ ವಿರುದ್ದ ಪದೇ ಪದೇ ಟೀಕೆ ಮಾಡುತ್ತಿರುವ ಕಾರಣ ಮುಜುಗರದ ಪರಿಸ್ಥಿತಿ ಎದುರಿಸುವಂತಾಗಿದೆ.

ಈ ಹಿನ್ನಲೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎನ್ನಲಾಗಿದ್ದು, ಪಕ್ಷ ತೊರೆಯಲು ಮುಂದಾಗಿರುವವರ ಮನವೊಲಿಸಲು ಹಾಗೂ ಸರ್ಕಾರದ ವಿರುದ್ದ ಟೀಕೆ ಮಾಡುತ್ತಿರುವವರ ವಿರುದ್ದ ಕ್ರಮ ಜರುಗಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...