alex Certify
ಕನ್ನಡ ದುನಿಯಾ       Mobile App
       

Kannada Duniya

FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ 507 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳು, 551 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯನ್ನು ಹೊರಡಿಸಿದೆ.

ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳಿಗೆ ಹುದ್ದೆಗಳನ್ನು ಮೀಸಲಿಡಲಾಗಿದೆ. ಪ್ರಥಮ ದರ್ಜೆ ಸಹಾಯಕರ 95, ದ್ವಿತೀಯ ದರ್ಜೆ ಸಹಾಯಕರ 47 ಹುದ್ದೆಗಳು ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿವೆ.

ಅಭ್ಯರ್ಥಿಗಳು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಪಿ.ಯು.ಸಿ. ಅಥವಾ ತತ್ಸಮಾನ ಐ.ಟಿ.ಐ., 3 ವರ್ಷದ ಡಿಪ್ಲೊಮೊ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 7, ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 9 ಕೊನೆಯ ದಿನವಾಗಿದೆ. ಪರೀಕ್ಷಾ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ., ಇತರೆ ವರ್ಗದ ಅಭ್ಯರ್ಥಿಗಳಿಗೆ 150 ರೂ., ಪರಿಶಿಷ್ಟ ಜಾತಿ/ ಪಂಗಡ, ಪ್ರವರ್ಗ 1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಕೆ ಮತ್ತು ಮಾಹಿತಿಗೆ www.kpsc.kar.nic.in ಗಮನಿಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...