alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್.ಗೆ ಹೊಸ ವ್ಯಾಖ್ಯಾನ ನೀಡಿದ ರಾಹುಲ್ ಗಾಂಧಿ

ಮಂಡ್ಯ: ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಬಿರುಸಿನ ಪ್ರವಾಸ ನಡೆಸಿದ್ದು, ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದಾರೆ.

ಇದೇ ವೇಳೆ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಹಾಸನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜೆ.ಡಿ.ಎಸ್. ಪಕ್ಷ ಬಿ.ಜೆ.ಪಿ.ಯ ‘ಬಿ’ ಟೀಂ ಎಂದು ಟೀಕಿಸಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ, ನಾನು ಬಿ.ಜೆ.ಪಿ. ಪಕ್ಕ ನಿಂತರೆ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ತಿರುಗೇಟು ನೀಡಿದ್ದರು.

ಇಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಮತ್ತೆ ಜೆ.ಡಿ.ಎಸ್. ಪಕ್ಷವನ್ನು ಟೀಕಿಸಿದ್ದಾರೆ.

ಜೆ.ಡಿ.ಎಸ್.ಗೆ ಹೊಸ ವ್ಯಾಖ್ಯಾನ ನೀಡಿರುವ ಅವರು, ಜೆ.ಡಿ.ಎಸ್. ಅಂದ್ರೆ ‘ಜನತಾದಳ ಸಂಘ ಪರಿವಾರ’ ಎಂದು ಹೇಳಿದ್ದಾರೆ. ರಾಜ್ಯದಲ್ಲಿ 2 ರಾಷ್ಟ್ರೀಯ ಪಕ್ಷಗಳಿವೆ. ಇವುಗಳ ನಡುವೆ ಜೆ.ಡಿ.ಎಸ್. ಎಂಬ ಮತ್ತೊಂದು ಪಕ್ಷವಿದೆ. ಬಿ.ಜೆ.ಪಿ. ‘ಎ’ ಮತ್ತು ‘ಬಿ’ ಟೀಂ ಗಳಿದ್ದರೂ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...