alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಆರ್.ಎಸ್. ಡ್ಯಾಂ ಗೆ ಮುತ್ತಿಗೆ ಹಾಕಲು ಯತ್ನ

krs damತಮಿಳುನಾಡಿಗೆ 10 ದಿನಗಳ ಕಾಲ ಪ್ರತಿನಿತ್ಯ 1500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿರುವುದನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಕೆ.ಆರ್.ಎಸ್. ಡ್ಯಾಂ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡ್ಯಾಂ ಮುಂಭಾಗದಲ್ಲಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರು ಗೇಟ್ ಮೂಲಕ ಡ್ಯಾಂ ಒಳಗೆ ಪ್ರವೇಶಿಸಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಅವರುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ಒಂದು ವೇಳೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದು ತಮಿಳುನಾಡಿಗೆ ನೀರು ಹರಿಸಿದರೆ ಇದು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ಮಧ್ಯೆ ಸೆಪ್ಟೆಂಬರ್ 9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...