alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರಿಗೇಡ್ ಸಭೆಯಲ್ಲಿ ಭಾಗಿಯಾದ ಕೆ.ಎಸ್. ಈಶ್ವರಪ್ಪ

eshwarappa-233ಶಾಸಕರ ಭವನದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪಾಲ್ಗೊಳ್ಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೊಮ್ಮೆ ಸೆಡ್ಡು ಹೊಡೆದಿದ್ದಾರೆ.

ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ ಬ್ರಿಗೇಡ್ ಸಭೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೆ ಬ್ರೇಕ್ ಬಿದ್ದಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಬ್ರೇಕೂ ಇಲ್ಲ, ಏನೂ ಇಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಇಂದಿನ ಸಭೆಯಲ್ಲಿ ಬ್ರಿಗೇಡ್ ನ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲಾಗುವುದು. ಬ್ರಿಗೇಡ್ ಚಟುವಟಿಕೆಯಲ್ಲಿರುವವರಿಗೆ ಬಿಜೆಪಿ ನೋಟಿಸ್ ನೀಡಿರುವ ಕುರಿತಂತೆ ಯಾವುದೇ ಮಾತುಕತೆ ನಡೆಯುವುದಿಲ್ಲವೆಂದಿದ್ದಾರೆ.

ನಾನು ನೇರವಾಗಿಯೇ ಬ್ರಿಗೇಡ್ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದ ಈಶ್ವರಪ್ಪ, ಪಕ್ಷಕ್ಕೆ ಧಕ್ಕೆಯಾಗದಂತೆ ಬ್ರಿಗೇಡ್ ಚಟುವಟಿಕೆ ನಡೆಸಿಕೊಂಡು ಹೋಗಲು ದೆಹಲಿಯಲ್ಲಿ ನಡೆದ ಮಾತುಕತೆ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದಾರೆ. ಇದಕ್ಕೆ ಯಡಿಯೂರಪ್ಪ ಕೂಡಾ ಒಪ್ಪಿಕೊಂಡಿದ್ದಾರೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...