alex Certify
ಕನ್ನಡ ದುನಿಯಾ       Mobile App
       

Kannada Duniya

‘ಎಂ.ಬಿ. ಪಾಟೀಲ್ ಸಿ.ಎಂ. ಮೇಲೆ ಪ್ರಮಾಣ ಮಾಡಲಿ’

ಕಲಬುರ್ಗಿ : ‘ಲಿಂಗಾಯತ ಧರ್ಮ ವಿಚಾರವಾಗಿ ತುಮಕೂರು ಸಿದ್ಧಗಂಗಾ ಶ್ರೀಗಳ ಹೇಳಿಕೆಯ ಕುರಿತಾಗಿ ಸಚಿವ ಎಂ.ಬಿ. ಪಾಟೀಲ್ ಪ್ರಮಾಣ ಮಾಡುವುದಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇಲೆ ಮಾಡಲಿ.’

ಹೀಗೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಲಿಂಗಾಯತರು –ವೀರಶೈವರ ನಡುವೆ ಜಗಳ ತಂದಿಟ್ಟು, ಸಮಾಜವನ್ನು ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಲಿಂಗಾಯತ –ವೀರಶೈವ ಧರ್ಮದ ವಿಚಾರವಾಗಿ ಹಿಂದಿನಿಂದಲೂ ಚರ್ಚೆ, ಹೋರಾಟಗಳು ನಡೆದಿವೆ. ಸಿದ್ಧರಾಮಯ್ಯ ಈ ವಿಚಾರವನ್ನು ರಾಜಕೀಯವಾಗಿಸಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಷಡ್ಯಂತ್ರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ.

ಸಿದ್ಧರಾಮಯ್ಯ ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗಿರುವುದು ಸರಿಯಲ್ಲ. ರಾಜ್ಯದ ಜನ ಅವರಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...