alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ಗೆಲುವು: ಈಶ್ವರಪ್ಪ

ಶಿವಮೊಗ್ಗ: ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಶಕ್ತಿ ಮೀರಿದ ಪ್ರಯತ್ನದಿಂದ ಬಿಜೆಪಿಗೆ ಗೆಲುವು ದೊರಕಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಪಾಲಿಕೆ ಚುನಾವಣೆ ಫಲಿತಾಂಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಪಡೆದಿದೆ. ಇದಕ್ಕೆ ಮತದಾರರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದು ಕಾರಣ. ಜೊತೆಗೆ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಶಕ್ತಿಮೀರಿ ಪ್ರಯತ್ನಿಸಿದ್ದಾರೆ. ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಸಿಕ್ಕ ಗೆಲುವಾಗಿದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ 1.04 ಲಕ್ಷ ಮತ ದೊರೆಕಿತ್ತು. ಅದೇ ರೀತಿ ಪಾಲಿಕೆ ಚುನಾವಣೆಯಲ್ಲಿಯೂ ಮತದಾರರು ಬಿಜೆಪಿ ಮೇಲೆ ನಂಬಿಕೆ ಇಟ್ಟು 20 ವಾರ್ಡ್ ಳಲ್ಲಿ ಗೆಲುವು ನೀಡಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ. ಪಾಲಿಕೆಯ 35 ವಾರ್ಡ್ ಗಳನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವತ್ತ ಸಂಘಟಿತ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದೆ. ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಗರವನ್ನು ಮಾದರಿಯನ್ನಾಗಿ ರೂಪಿಸಲಾಗುವುದು ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...