alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಯಲ್ಲಿ ಗೊಂದಲವಿರುವುದಾಗಿ ಪುನರುಚ್ಚರಿಸಿದ ಈಶ್ವರಪ್ಪ

eshwarappa-334ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ನಡುವಿನ ಮನಸ್ತಾಪ ಮುಂದುವರೆದಿದ್ದು, ಇಂದು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾತನಾಡಿರುವ ಕೆ.ಎಸ್. ಈಶ್ವರಪ್ಪ, ಬಿಜೆಪಿಯಲ್ಲಿ ಕೆಲ ಗೊಂದಲವಿರುವುದಾಗಿ ಪುನರುಚ್ಚರಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವರಿಷ್ಟರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ತೊರೆಯುವಂತೆ ತಮಗೆ ಸೂಚಿಸಿಲ್ಲ. ಯಡಿಯೂರಪ್ಪನವರು ತೆಗೆದುಕೊಂಡಿರುವ ಕೆಲ ಏಕಪಕ್ಷೀಯ ನಿರ್ಧಾರಗಳ ಕುರಿತು ಅವರ ಗಮನಕ್ಕೆ ತಂದ ವೇಳೆ ಯಡಿಯೂರಪ್ಪನವರೊಂದಿಗೆ ಸಮಾಲೋಚಿಸುವಂತೆ ತಿಳಿಸಿದ್ದಾರೆಂದು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ರಾಜಕೀಯೇತರ ಸಂಘಟನೆಯಾಗಿದ್ದು, ಇದಕ್ಕೆ ಹಲವು ಮಠಾಧೀಶರು ಬೆಂಬಲ ಸೂಚಿಸಿದ್ದಾರೆ. ಬ್ರಿಗೇಡ್ ಚಟುವಟಿಕೆಗಳು ಎಂದಿನಂತೆ ಮುಂದುವರೆಯಲಿವೆ ಎಂದು ಹೇಳುವ ಮೂಲಕ ಈಶ್ವರಪ್ಪ, ಯಡಿಯೂರಪ್ಪನವರಿಗೆ ಮತ್ತೊಮ್ಮೆ ಸೆಡ್ಡು ಹೊಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...