alex Certify
ಕನ್ನಡ ದುನಿಯಾ       Mobile App
       

Kannada Duniya

ರೈತ ನಾಯಕ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಇನ್ನಿಲ್ಲ

ಹಿರಿಯ ರೈತ ನಾಯಕ, ಮಂಡ್ಯ ಜಿಲ್ಲೆ ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಪಾಲ್ಗೊಂಡಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಭಾನುವಾರದಂದು ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯನ್ನು ವೀಕ್ಷಿಸುತ್ತಿದ್ದ ಪುಟ್ಟಣ್ಣಯ್ಯನವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

69 ವರ್ಷದ ಪುಟ್ಟಣ್ಣಯ್ಯನವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 1994 ರಲ್ಲಿ ಪಾಂಡವಪುರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಅವರು, 2013 ರಲ್ಲಿ ಮೇಲುಕೋಟೆ ಕ್ಷೇತ್ರದಿಂದ ಸರ್ವೋದಯ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಹಿರಿಯ ರೈತ ನಾಯಕರಾಗಿದ್ದ ಪುಟ್ಟಣ್ಣಯ್ಯನವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...