alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸಿದ್ದರಾಮಯ್ಯ ವಿರುದ್ದ ಗುಡುಗಿದ ಈಶ್ವರಪ್ಪ

ಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಹಿಂದ ವರ್ಗಕ್ಕೆ ದ್ರೋಹ ಎಸಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ದೂರಿದರು.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕುವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸಮಾಜದಲ್ಲಿ ಗೊಂದಲ ಮೂಡಿಸುವ ಅನೇಕ ಪ್ರಯತ್ನ ನಡೆಸಿದ್ದಾರೆ. ಈಗ ಚುನಾವಣೆ ಘೋಷಣೆಯಾಗಿದೆ. ಬಡಾಯಿ ಮಾತುಗಳನ್ನಾಡಿ ಜನರ ಮತ ಪಡೆಯುತ್ತಾರೋ ತಿಳಿಸಬೇಕೆಂದರು.

ಹಿಂದುಳಿದ ಮತ್ತು ದಲಿತ ವರ್ಗಕ್ಕೆ ಅನ್ಯಾಯ ಎಸಗಿದ್ದಾರೆ. ಚುನಾವಣಾ ಪೂರ್ವದಲ್ಲಿ ಹೇಳಿದ್ದೊಂದು ಅಧಿಕಾರಕ್ಕೆ ಬಂದ ನಂತರ ಮಾಡಿದ್ದೊಂದು. ಹಿಂದ ವರ್ಗಕ್ಕೆ ಭೋಗಸ್ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದರು. ನಂತರ ನೀಡಿದ ಆಶ್ವಾಸನೆಯಂತೆ ಉದ್ಯೋಗ, ಶಿಕ್ಷಣ, ವಾಸಕ್ಕೆ ಮನೆ ನೀಡಲಿಲ್ಲ. ಮಾತೆತ್ತಿದರೆ ಹಿಂದ ವರ್ಗವನ್ನು ಉದ್ದಾರ ಮಾಡಿದ್ದೇವೆ ಎಂಬ ಹೇಳಿಕೆ ನೀಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಹಿಂದ ವರ್ಗಕ್ಕೆ ಬಿಡುಗಡೆಯಾಗಿರುವ ಅನುದಾನ ಎಷ್ಟು..? ಹಿಂದ ವರ್ಗದ ಛಾಂಪಿಯನ್ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದ ವರ್ಗದ ಅಭಿವೃದ್ದಿಗೆ ಬಿಡುಗಡೆಯಾದ ಅನುದಾನ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದೂ ವಿರೋಧಿ ನೀತಿಯನ್ನೆ ಅನುಸರಿಸಲಾಗಿದೆ. ಪ್ರಾರಂಭದಲ್ಲಿ ಉಡುಪಿ ಶ್ರೀಕೃಷ್ಣ ಮಠವನ್ನು ಸರ್ಕಾರದ ಸ್ವಾಧೀನಕ್ಕೆ ಪಡೆಯಲಾಗುವುದು ಎಂದು ಹೇಳಿದ್ದರು, ನಂತರ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಅದರಿಂದ ಹಿಂದಕ್ಕೆ ಸರಿದರು. ಮುಖ್ಯಮಂತ್ರಿ ಅವಧಿಯಲ್ಲಿ ಸಿದ್ದರಾಮಯ್ಯ ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿಲ್ಲ. ರಾಹುಲ್ ಗಾಂಧಿಗೂ ದರ್ಶನ ಪಡೆಯುವುದಕ್ಕೆ ಬಿಡಲಿಲ್ಲ. ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು ಎಂದರು.

ಶ್ರೀಕೃಷ್ಣ ಮಠದಿಂದ ತಮಗೆ ಆಹ್ವಾನ ಬಂದಿಲ್ಲ. ಹೀಗಾಗಿ ಭೇಟಿ ನೀಡಿಲ್ಲ ಎಂದು ಹೇಳಿಕೆ ನೀಡುತ್ತಾರೆ. ಕೃಷ್ಣ ಮಠಕ್ಕೆ ಆಹ್ವಾನ ನೀಡಲು ಅಲ್ಲೇನು ಮದುವೆ ನಡೆಯುತ್ತಿದೆಯೇ..? ರಾಜಕೀಯ ದೊಂಬರಾಟ, ನಾಟಕ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಗೋ ಹತ್ಯೆ ನಡೆಸಲು ಕಾಂಗ್ರೆಸ್ ಬದ್ದವಾಗಿದೆ, ಗೋ ಮಾಂಸ ಸೇವಿಸುತ್ತೇನೆ, ಪಾಕಿಸ್ತಾನ ಪರ ಘೋಷಣೆ ಕೂಗಿದ ಪಿಎಫ್ಐ ಕಾರ್ಯಕರ್ತರಿಗೆ ರಕ್ಷಣೆ ಕೊಟ್ಟಿದ್ದೇವೆ ಎಂದು ಈ ಚುನಾವಣೆಯಲ್ಲಿ ವೋಟು ಕೇಳಲಿ ಎಂದು ಛೇಡಿಸಿದರು.

ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಮಠ-ಮಾನ್ಯಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಮಠಗಳ ಅಭಿವೃದ್ದಿಗೆ ಅನುದಾನ ನೀಡಿದ್ದಾರೆಯೇ ತಿಳಿಸಬೇಕು. ಕೇವಲ ಹಿಂದ ವರ್ಗದ ಹೆಸರನ್ನು ಮುಂದಿಟ್ಟುಕೊಂಡು ಸುಳ್ಳು ಆಶ್ವಾಸನೆಗಳನ್ನು ನೀಡಿ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬಿಜೆಪಿಯನ್ನು ಟೀಕಿಸುವುದಕ್ಕೂ ಮೊದಲು ಕಾಂಗ್ರೆಸ್ ನ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಆಂತರಿಕ ಸಮೀಕ್ಷೆ ಪಕ್ಷದಿಂದ ನಡೆಯುತ್ತಿದೆ. ಶಿವಮೊಗ್ಗ ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ಸರ್ವೇ ಕಾರ್ಯ ಪೂರ್ಣಗೊಂಡ ನಂತರ ಗೆಲುವು ಸಾಧಿಸುವ ಅಭ್ಯರ್ಥಿಗಳಿಗೆ ವರಿಷ್ಟರು ಟಿಕೆಟ್ ನೀಡಲಿದ್ದಾರೆ. ಶಿವಮೊಗ್ಗದಲ್ಲೂ ಹಲವರು ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ. ಇದು ಕಾಂಗ್ರೆಸ್ ಅಲ್ಲ ಬಿಜೆಪಿ ಎಂದು ಹೇಳಿದರು.

ಸಿ-ಫೋರ್ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಈ ಹಿಂದೆ ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಸಮೀಕ್ಷೆ ನಡೆಸಿ 174 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂಬ ವರದಿ ನೀಡಿತ್ತು. ಆದರೆ ಫಲಿತಾಂಶ ಬೇರೆಯದೇ ರೀತಿಯದ್ದಾಗಿತ್ತು. ಬಿಜೆಪಿ 324 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿತ್ತು ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...