alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರಿಗೆ ನೌಕರರ ಸಂಘಟನೆ ಜೊತೆ ಸರ್ಕಾರ ನಡೆಸಿದ ಸಭೆ ವಿಫಲ

bus-strike

ಸಾರಿಗೆ ನೌಕರರ ಸಂಘಟನೆ ಮುಷ್ಕರ ಮೂರನೇ ದಿನವೂ ಮುಂದುವರೆದಿದೆ. ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸರ್ಕಾರ ನಡೆಸಿದ ಮಾತುಕತೆ ವಿಫಲವಾಗಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.

ಬೆಂಗಳೂರಿನ ಶಾಂತಿನಗರ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಯ್ತು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಂಘಟನೆ ಸದಸ್ಯರು ಹಾಗೂ ನಾಲ್ಕು ವಿಭಾಗದ ಸಾರಿಗೆ ಇಲಾಖೆಯ ಎಂ.ಡಿ.ಗಳು ಪಾಲ್ಗೊಂಡಿದ್ದರು. ಸಾರಿಗೆ ನೌಕರರ ಸಂಘಟನೆಗಳು ಶೇಕಡಾ 18ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿವೆ. ಆದ್ರೆ ಸರ್ಕಾರ ಬೇಡಿಕೆಯನ್ನು ನಿರಾಕರಿಸಿದೆ. ಶೇಕಡಾ 10ರಷ್ಟು ವೇತನ ಹೆಚ್ಚಳ ಮಾತ್ರ ಸಾಧ್ಯ ಎಂದಿದೆ. ಇದರಿಂದಾಗಿ ಮುಷ್ಕರ ಮುಂದುವರೆಸಲು ಸಾರಿಗೆ ನೌಕರರ ಸಂಘಟನೆಗಳು ನಿರ್ಧರಿಸಿವೆ.

ರಾಜ್ಯದ ವಿವಿಧೆಡೆ ಪ್ರತಿಭಟನೆ ಮುಂದುವರೆದಿದ್ದು, ನೌಕರರ ಪತ್ನಿಯರು ಕೂಡ ಹೋರಾಟಕ್ಕೆ ಇಳಿದಿದ್ದಾರೆ. ಬಸ್ ರಸ್ತೆಗಿಳಿಯದೇ ಇರುವುದರಿಂದ ಪ್ರಯಾಣಿಕರ ಪಾಡು ಹೇಳತೀರದಾಗಿದೆ. ಸಂಜೆಯೊಳಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...