alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಪಲ್ಟಿಯಾಗಿ 20 ಮಂದಿಗೆ ಗಾಯ

acc ag 16

ಚಿತ್ರದುರ್ಗ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ ಮಕ್ಕಳು ಸೇರಿದಂತೆ, 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಚನ್ನಮ್ಮನಹಳ್ಳಿ ಸಮೀಪ ನಡೆದಿದೆ.

ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚನ್ನಮ್ಮನಹಳ್ಳಿ ಸಮೀಪದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಶಾಲಾ, ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಪ್ರಯಾಣಿಕರು ಕೂಡ ಗಾಯಗೊಂಡಿದ್ದು, ಅವರಲ್ಲಿ ನಾಲ್ವರಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹಿರಿಯೂರು ಠಾಣೆ ಪೊಲೀಸರು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...