alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿವಮೊಗ್ಗ ಮೂಲದ ದಂಪತಿ ಸಾವನ್ನಪ್ಪಿದ್ದು, 6 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆ.ಎಸ್.ಆರ್.ಟಿ.ಸಿ. ಬಸ್ ತರೀಕೆರೆಯಿಂದ ಬೆಂಗಳೂರಿಗೆ ಬರುತ್ತಿತ್ತೆಂದು ಹೇಳಲಾಗಿದೆ.

ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆಯೇ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...