alex Certify
ಕನ್ನಡ ದುನಿಯಾ       Mobile App
       

Kannada Duniya

KSRTC ನಿವೃತ್ತ ನೌಕರರ ಪತ್ನಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಿವೃತ್ತ ನೌಕರರ ಪತ್ನಿಯರಿಗೆ ಬಸ್ ಪಾಸ್ ನೀಡಲು ತೀರ್ಮಾನಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(KSRTC) ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಂಸ್ಥೆಗಳ ನಿವೃತ್ತ ನೌಕರರ ಪತ್ನಿಯರಿಗೆ ರಿಯಾಯಿತಿ ದರದ ಬಸ್ ಪಾಸ್ ವಿತರಿಸಲಾಗುವುದು. 500 ರೂ. ಪಾವತಿಸಿ ವಾರ್ಷಿಕ ಬಸ್ ಪಾಸ್ ಪಡೆದುಕೊಂಡು ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಅದೇ ರೀತಿ ದರ್ಜೆ 2 ಕ್ಕೂ ಮೇಲ್ಪಟ್ಟ ನಿವೃತ್ತ ಅಧಿಕಾರಿಗಳ ಪತ್ನಿಯರಿಗೆ ರಾಜಹಂಸ ಸೇರಿ ಎಲ್ಲಾ ಬಸ್ ಗಳಲ್ಲಿ ಶೇ. 50 ರಷ್ಟು ಟಿಕೆಟ್ ದರ ಪಾವತಿಸಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...