alex Certify
ಕನ್ನಡ ದುನಿಯಾ       Mobile App
       

Kannada Duniya

ಮೂತ್ರ ವಿಸರ್ಜನೆಗೆ ಹೋದಾಗಲೇ..

tumkur

ತುಮಕೂರು: ಮೂತ್ರ ವಿಸರ್ಜನೆಗೆ ಹೋಗಿದ್ದ ಬಸ್ ಚಾಲಕನೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾನ್ವಿ ಡಿಪೋ ಚಾಲಕ ಜಾಕೂಬ್ ಇರಿತಕ್ಕೆ ಒಳಗಾದವರು.

ಮಾನ್ವಿ ಕೆ.ಎಸ್.ಆರ್.ಟಿ.ಸಿ. ಡಿಪೋ ಚಾಲಕರಾಗಿರುವ 40 ವರ್ಷದ ಜಾಕೂಬ್ ತುಮಕೂರು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ, ನಿಲ್ದಾಣದಲ್ಲಿದ್ದ ಮೂತ್ರಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರಿಗೆ ಚಾಕುವಿನಿಂದ ಇರಿದು ಹಣ ದೋಚಲು ಪ್ರಯತ್ನಿಸಿದ್ದಾರೆ. ಅವರು ನಿರ್ವಾಹಕರಾಗಿದ್ದು, ಅವರ ಬಳಿ ಹಣ ಇರಬಹುದೆಂದು ದುಷ್ಕರ್ಮಿಗಳು ಈ ಕೃತ್ಯ ಎಸಗಿರಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಚಾಲಕ ಜಾಕೂಬ್ ರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...