alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದುವರೆದ ಮುಷ್ಕರ, ಪ್ರಯಾಣಿಕರ ಪರದಾಟ

ksrtc sun

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ., ವಾಯುವ್ಯ ಹಾಗೂ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ.

ಭಾನುವಾರ ಮಧ್ಯಾಹ್ನದಿಂದಲೇ ಆರಂಭವಾದ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರ ಪಾಡಂತೂ ಹೇಳತೀರದಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಇಂದೂ ಮುಂದುವರೆಸಲಾಗಿದೆ. ಮುಷ್ಕರಕ್ಕೆ ಪ್ರತಿಯಾಗಿ ಸರ್ಕಾರ, ಪೊಲೀಸ್ ಸರ್ಪಗಾವಲಿನಲ್ಲಿ ಕೆಲವು ಕಡೆಗಳಲ್ಲಿ ಬಸ್ ಸಂಚಾರ ಆರಂಭಿಸಿದೆ. ಆದರೆ, ಅದು ಯಶಸ್ವಿಯಾಗಿಲ್ಲ. ಬೆಂಗಳೂರಿನಲ್ಲಿ ಪ್ರಯಾಣಿಕರು ಮೆಟ್ರೋ, ಆಟೋ, ಖಾಸಗಿ ವಾಹನಗಳನ್ನು ಅವಲಂಬಿಸಿದ್ದಾರೆ.

ಇನ್ನು ರಾಜ್ಯದ ಕೆಲವು ಕಡೆಗಳಲ್ಲಿ ಶಾಲಾ- ಕಾಲೇಜಿಗೆ ರಜೆ ಮುಂದುವರೆಸಲಾಗಿದೆ. ಪರ್ಯಾಯ ವ್ಯವಸ್ಥೆ ಇಲ್ಲದೇ, ಕೆಲವು ಕಡೆಗಳಲ್ಲಿ ಬಸ್ ನಿಲ್ದಾಣಗಳಲ್ಲಿಯೇ ಪ್ರಯಾಣಿಕರು ದಿನಕಳೆದ ಕುರಿತು ವರದಿಯಾಗಿದೆ. ಸರ್ಕಾರ ಹಾಗೂ ನೌಕರ ಸಂಘಟನೆಗಳ ನಡುವೆ ಮಾತುಕತೆ ವಿಫಲವಾಗಿದ್ದು, ಇಂದೂ ಕೂಡ ಮುಷ್ಕರ ಮುಂದುವರೆಯಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...