alex Certify
ಕನ್ನಡ ದುನಿಯಾ       Mobile App
       

Kannada Duniya

ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್…!

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ.
ವೆಬ್ಸೈಟ್ ಹ್ಯಾಕ್ ಮಾಡಿರುವ ಹ್ಯಾಕರ್ಗಳು ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ತೆಗೆದು ಹಾಕಿದ್ದಾರೆ. ಅಲ್ಲದೇ ವೆಬ್ಸೈಟ್ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು ಬರೆಯಲಾಗಿದೆ.

ವಿಶ್ವವಿದ್ಯಾಲಯದ ವೆಬ್ಸೈಟ್ ಮೊದಲ ಬಾರಿಗೆ ಹ್ಯಾಕ್ ಆಗಿದೆ. ಘಟನೆಯಿಂದಾಗಿ ವಿವಿ ಆಡಳಿತ ಮಂಡಳಿ ದಿಗ್ಬ್ರಮೆಗೊಂಡಿದೆ. ಹ್ಯಾಕ್ ಮಾಡಿರುವ ಹ್ಯಾಕರ್ಗಳು ವೆಬ್ ಸೈಟ್ ನ ಭದ್ರತೆಯನ್ನೇ ಅಣಕ ಮಾಡುವಂತಹ ಬರಹಗಳನ್ನು ಪ್ರಕಟಿಸಿದ್ದಾರೆ.

ಕೆಲವು ಪ್ರತಿಷ್ಟಿತ ಇಲಾಖೆಗಳು, ಸರ್ಕಾರಿ ಸಂಸ್ಥೆಗಳ ವೆಬ್ಸೈಟ್ ನ್ನು ಹ್ಯಾಕ್ ಮಾಡುವುದು ಆಗಾಗ ನಡೆಯುತ್ತಿರುತ್ತದೆ. ಇದೀಗ ವಿವಿ ವೆಬ್ಸೈಟ್ ಮೇಲೂ ಹ್ಯಾಕರ್ಗಳ ಕಣ್ಣು ಬಿದ್ದಿರುವುದು ವಿವಿ ಆಡಳಿತ ಮಂಡಳಿಯನ್ನು ಬೆಚ್ಚಿ ಬೀಳಿಸಿದೆ.

ಈ ಸಂಬಂಧ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...