alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಾರ್ ಬಂಗಾರಪ್ಪ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

gkumar-bangarappaಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತಪಟ್ಟಿದೆ. ಮಾ.9 ರಂದು ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಕುಮಾರ್ ಬಂಗಾರಪ್ಪ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಖಚಿತಪಡಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಕುಮಾರ್ ಬಂಗಾರಪ್ಪರಿಗೆ ಸೊರಬ ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ನೀಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಟರು ಈ ಕುರಿತು ತೀರ್ಮಾನಿಸಲಿದ್ದಾರೆಂದು ಹೇಳಿದ್ದಾರೆ.

ಕುಮಾರ್ ಬಂಗಾರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗುತ್ತಿದ್ದು, ಸೊರಬದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪರಿಗೆ ಬಿಜೆಪಿ ಟಿಕೇಟ್ ಖಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...