alex Certify
ಕನ್ನಡ ದುನಿಯಾ       Mobile App
       

Kannada Duniya

ಪೂಜಾರಿ ಹೇಳಿಕೆಗೆ ಕುಮಾರ್ ಬಂಗಾರಪ್ಪ ಆಕ್ಷೇಪ

kumar bam

ಶಿವಮೊಗ್ಗ: ಸಚಿವರ ಕಾರ್ಯವೈಖರಿ ಕುರಿತಂತೆ ಸಭೆಯೊಂದರಲ್ಲಿ, ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಅವರು ನೀಡಿದ ಹೇಳಿಕೆ ಬಗ್ಗೆ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಪಕ್ಷದ ವೇದಿಕೆಯಲ್ಲಿ ಚರ್ಚಿಸದೇ ಬಹಿರಂಗ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ಮೈಸೂರಿನಲ್ಲಿ ಪಂಚಾಯಿತಿ ಸಮಾವೇಶದಲ್ಲಿ ಮಾತನಾಡುತ್ತಾ ಜನಾರ್ಧನ ಪೂಜಾರಿ ರಾಜ್ಯ ಸಚಿವ ಸಂಪುಟದಲ್ಲಿ ಕೆಲವು ಸೋಂಬೇರಿ ಸಚಿವರಿದ್ದಾರೆ. ಅವರ ಕಾರ್ಯವೈಖರಿ ಸರಿ ಇಲ್ಲ ಎಂದು ಟೀಕಿಸಿದ್ದಾರೆ. ಹೀಗೆ ಬಹಿರಂಗವಾಗಿ ಟೀಕಿಸುವ ಬದಲಿಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಅವರ ಬಳಿ ಚರ್ಚೆ ನಡೆಸಬಹುದಿತ್ತು. ಹಿರಿಯ ನಾಯಕರಾಗಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಹೇಳಿದರು.

ನೀತಿಸಂಹಿತೆಯನ್ನು ತೇಜೋವಧೆ ಮಾಡುವ ರೀತಿಯಲ್ಲಿ ಬಿಜೆಪಿಯವರು ಚುನಾವಣೆ ನಡೆಸುತ್ತಿದ್ದಾರೆ. ಕೀಳುಮಟ್ಟದ ಹೇಳಿಕೆ ನೀಡುತ್ತಾ, ರಾಜಕಾರಣ ಮಾಡುತ್ತಿರುವುದು ನಿಜಕ್ಕೂ ದುರಂತ. ಈ ರೀತಿ ಕೆಳಮಟ್ಟದ ರಾಜಕಾರಣ ಶಿವಮೊಗ್ಗ ಜಿಲ್ಲೆಯಲ್ಲಿ ಈ ಹಿಂದೆ ಎಂದೂ ನಡೆದಿರಲಿಲ್ಲ ಎಂದು ದೂರಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...