alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆಯುತ್ತಿರುವ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟವನ್ನು ಎರಡು ಹಂತದಲ್ಲಿ ತುಂಬುವ ಬಗ್ಗೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನ ಕೆಲವು ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದಿನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪಾಲ್ಗೊಂಡಿದ್ದು, ಮೊದಲ ಹಂತದ ಸಂಪುಟ ರಚನೆಯ ಪದಗ್ರಹಣದಲ್ಲಿ ಜೆಡಿಎಸ್ ನ ಸಿ.ಎಸ್. ಪುಟ್ಟರಾಜು, ಹೆಚ್.ಕೆ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ಜಿ.ಟಿ. ದೇವೇಗೌಡ, ಬಂಡೆಪ್ಪ ಕಾಶಂಪುರ್, ಹೆಚ್. ವಿಶ್ವನಾಥ್, ಎನ್. ಮಹೇಶ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಾಳಯದಿಂದ ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣಭೈರೇಗೌಡ, ಜಮೀರ್ ಅಹಮದ್ ಖಾನ್, ಡಾ. ಕೆ. ಸುಧಾಕರ್, ರೂಪಾ ಶಶಿಧರ್, ಎ. ಕೃಷ್ಣಪ್ಪ ಅವರು ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...