alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕೀಯದಲ್ಲಿ ‘ಸಂಚಲನ’ ಸೃಷ್ಟಿಸಿದ ಡಿಸಿಎಂ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಆಯ್ಕೆಯಾಗಿದ್ದಾರೆ.

ದೋಸ್ತಿ ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗುತ್ತಿದೆ ಎನ್ನುವಾಗಲೇ ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸ್ಥಾನ ತೊರೆಯಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ತಾವು ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಅವಧಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದು, ಹೀಗಾಗಿಯೇ ಹೈಕಮಾಂಡ್ ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನ ನೀಡಿದರೂ ಅದನ್ನು ನಿಭಾಯಿಸುವೆ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಹೇಳಿಕೆಗೆ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿ ಹುದ್ದೆಯನ್ನು ನಿಭಾಯಿಸಲು ಸಮರ್ಥರಿದ್ದಾರೆ. ಅವರುಗಳ ಪೈಕಿ ಪರಮೇಶ್ವರ್ ಕೂಡ ಒಬ್ಬರು ಎಂದಿದ್ದಾರಲ್ಲದೆ, ಮುಖ್ಯಮಂತ್ರಿ ಹುದ್ದೆ ಯಾರಿಗೂ ಶಾಶ್ವತವಲ್ಲ ಎಂದು ಹೇಳುವ ಮೂಲಕ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...