alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯಕ್ಕೆ ‘ಗುಡ್ ನ್ಯೂಸ್’ ಕೊಟ್ಟ ಸಿಎಂ

ಕಳೆದೆರಡು ವರ್ಷಗಳಿಂದ ವರ್ಗಾವಣೆ ಪ್ರಕ್ರಿಯೆಗಾಗಿ ಕೌನ್ಸೆಲಿಂಗ್ ನಡೆಯದ ಕಾರಣ ಈ ಬಾರಿ ಆರಂಭಗೊಂಡ ವೇಳೆ ಸಮಾಧಾನ ನಿಟ್ಟುಸಿರುಬಿಟ್ಟಿದ್ದ ಶಿಕ್ಷಕ ಸಮುದಾಯ, ಬಳಿಕ ಇದು ಮುಂದೂಡಲ್ಪಟ್ಟಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.

ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶಿಕ್ಷಕ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ ತಿಂಗಳ ಒಳಗಾಗಿ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

ಕುಮಾರಸ್ವಾಮಿಯವರ ಸರ್ಕಾರವೆಂದರೆ ಶಿಕ್ಷಕರ ಸರ್ಕಾರ ಎಂದು ಹೇಳಿದ ಮುಖ್ಯಮಂತ್ರಿಗಳು, ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ ವರ್ಗಾವಣೆಗೊಂಡ ಶಿಕ್ಷಕರು ನಿಯೋಜಿತ ಸ್ಥಳಕ್ಕೆ ರಿಪೋರ್ಟ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...