alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಕುಮಾರಸ್ವಾಮಿ ಬಿಜೆಪಿಯ ಆಪರೇಷನ್ ಕಿಂಗ್ ಪಿನ್ ಗಳ ರಹಸ್ಯ ಬೇಧಿಸಿದ್ದು ಹೇಗೆ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹೆಣೆದಿರುವ ಆಪರೇಶನ್ ಕಮಲ ತಂತ್ರಗಾರಿಕೆ ಹಾಗೂ ಅದರ ಕಿಂಗ್ ಪಿನ್ ಗಳ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಗೊತ್ತಾಗಿದ್ದು ಹೇಗೆ ಎಂಬ ಕುತೂಹಲ ಈಗ ಎಲ್ಲರಲ್ಲೂ ಮನೆ ಮಾಡಿದೆ.

ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಇಲಾಖೆಯನ್ನು ಮಾತ್ರ ವಹಿಸಿಕೊಟ್ಟಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಗುಪ್ತಚರ ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಇದರ ಮೂಲಕವೇ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ಉರುಳಿಸುವ ಬಿಜೆಪಿಯ ರಣತಂತ್ರ ಹಾಗೂ ಅವರ ಕಿಂಗ್ ಪಿನ್ ಗಳ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ.

ಬಿಜೆಪಿಯ ಆಪರೇಷನ್ ಕಮಲದ ಮೇಲೆ ಸಿಎಂ ಕುಮಾರಸ್ವಾಮಿ ಗುಪ್ತಚರ ಇಲಾಖೆಯ ಮೂಲಕ ಹದ್ದಿನ ಕಣ್ಣಿಟ್ಟಿದ್ದರು. ಇದಕ್ಕಾಗಿ ನುರಿತ ಪೊಲೀಸರ ಬಳಕೆ ಮಾಡಿಕೊಂಡಿದ್ದಲ್ಲದೇ, ನಿವೃತ್ತ ಹಾಗೂ ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವ ಮೂಲಕ ಬಿಜೆಪಿ ರಣತಂತ್ರವನ್ನು ಬಯಲಿಗೆಳೆದಿದ್ದಾರೆ. ಈ ಅಧಿಕಾರಿಗಳು ಸಿಎಂ ಅವರಿಗೆ ಆಪರೇಷನ್ ಕಮಲದ ಕಿಂಗ್‍ಪಿನ್‍ಗಳ ಪಟ್ಟಿಯನ್ನು ಹಾಗೂ ಅವರ ಹಿನ್ನಲೆಯ ಕುರಿತಾಗಿ ಕೂಡ ಸಂಪೂರ್ಣವಾದ ಮಾಹಿತಿ ನೀಡಿದ್ದಾರೆ. ಈ ಮೂಲಕವೇ ಕುಮಾರಸ್ವಾಮಿಯವರು ಬಿಜೆಪಿಯ ಕಿಂಗ್ ಪಿನ್ ಗಳ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದರು ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...