alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನರಿಗೆ ಇಂದು ಸಿಗುತ್ತಾ ಸಿಹಿ ಸುದ್ದಿ…?

ಪೆಟ್ರೋಲ್-ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನಲೆಯಲ್ಲಿ ವಾಹನ ಸವಾರರು ಈಗಾಗಲೇ ಹೈರಾಣಾಗಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ತನ್ನ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿರುವ ಪರಿಣಾಮ ಬೆಲೆ ಮತ್ತಷ್ಟು ಏರಿದೆ.

ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಸಾರ್ವಜನಿಕರು, ವಿರೋಧ ಪಕ್ಷದ ನಾಯಕರು ಮಾತ್ರವಲ್ಲದೆ ಮೈತ್ರಿಕೂಟ ಸರ್ಕಾರದ ಶಾಸಕರುಗಳೂ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಇಂದು ನಡೆಯುವ ಬಜೆಟ್ ಮೇಲಿನ ಚರ್ಚೆ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸೆಸ್ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಲಿದ್ದಾರೆಂದು ಹೇಳಲಾಗುತ್ತಿದೆ.

ಇದರ ಜೊತೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಈ ಹಿಂದಿನಂತೆ 7 ಕೆ.ಜಿ. ಅಕ್ಕಿ ನೀಡುವ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಿಸುವ ಪ್ರಮಾಣವನ್ನು 7 ಕೆ.ಜಿ.ಯಿಂದ 5 ಕೆ.ಜಿ.ಗೆ ಇಳಿಕೆ ಮಾಡಲಾಗಿದ್ದು, ಇದಕ್ಕೂ ಹಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...