alex Certify
ಕನ್ನಡ ದುನಿಯಾ       Mobile App
       

Kannada Duniya

ಅನ್ನಭಾಗ್ಯದ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮತ್ತೆ 7 ಕೆಜಿಗೆ ಏರಿಕೆಯಾಗಲಿದೆ ಅಕ್ಕಿ

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ ಮತ್ತೆ ಯಥಾ ಪ್ರಕಾರ ಮುಂದುವರಿಯಲಿದೆ. ಈ ಹಿಂದಿನಂತೆ 7 ಕೆ.ಜಿ. ಅಕ್ಕಿ ನೀಡುವ ತೀರ್ಮಾನವನ್ನು ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ.

ಬಜೆಟ್ ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು 7 ಕೆ.ಜಿ. ಅಕ್ಕಿಯ ಬದಲಿಗೆ 5 ಕೆ.ಜಿ. ಅಕ್ಕಿ ನೀಡುವ ತೀರ್ಮಾನ ಕೈಗೊಂಡಿದ್ದು, ಇದಕ್ಕೆ ಕಾಂಗ್ರೆಸ್ ಶಾಸಕರು ಮಾತ್ರವಲ್ಲದೆ ಜೆಡಿಎಸ್ ಶಾಸಕರೂ ಸಹ ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದು ಅನ್ನಭಾಗ್ಯ ಯೋಜನೆಯಲ್ಲಿ ನೀಡುವ ಅಕ್ಕಿಯನ್ನು ಕಡಿತಗೊಳಿಸಬಾರದೆಂದು ಮನವಿ ಮಾಡಿದ್ದು, ಶಾಸಕರ ಒತ್ತಡ ಹಾಗೂ ಸಚಿವರ ಮನವಿಯನ್ನು ಪರಿಗಣಿಸಿ ಮುಖ್ಯಮಂತ್ರಿಗಳು ಹಿಂದಿನಂತೆ ಫಲಾನುಭವಿಗಳಿಗೆ 7 ಕೆ.ಜಿ. ಅಕ್ಕಿಯನ್ನು ನೀಡುವ ತೀರ್ಮಾನವನ್ನು ಸದನದಲ್ಲಿ ಪ್ರಕಟಿಸಲಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...